ಭಟ್ಕಳ: ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ನ (ಎಐಟಿಎಂ) ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿoಗ್ ವಿಭಾಗದ ಪ್ರಾಧ್ಯಾಪಕ ಕಿರಣ್ ವಿನಾಯಕ ಶಾನಭಾಗ್ ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲ ಪಿಎಚ್ಡಿ ಪದವಿ ನೀಡಿದೆ.
ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿAಗ್ ವಿಭಾಗದ ಪ್ರಾಧ್ಯಾಪಕಿ ಮತ್ತು ಮುಖ್ಯಸ್ಥರಾದ ಡಾ. ದಯಾಕ್ಷಿಣಿ ಎಸ್. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಪ್ರಬಂಧಕ್ಕೆ ಈ ಬಿರುದು ದೊರೆತಿದೆ.