ಸೋಮವಾರ ತಪ್ಪದೇ ಶಾಲೆಗೆ ಬನ್ನಿ!
ಜುಲೈ 29ರ ಸೋಮವಾರ ಕರಾವಳಿ ಭಾಗದಲ್ಲಿ ಮಳೆ ಮುಂದುವರೆಯುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆದರೂ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಆಗಿಲ್ಲ.
ಕಳೆದ ಎರಡು ವಾರಗಳ ಕಾಲ ಜಿಲ್ಲೆಯಲ್ಲಿ ಬಹುತೇಕ ರೆಡ್ ಅಲರ್ಟ ಘೋಷಣೆ ಆಗಿತ್ತು. ಹೀಗಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಪ್ರಸ್ತುತ ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿದೆ. ಮಲೆನಾಡು ಭಾಗದಲ್ಲಿ ಸಣ್ಣ ಪ್ರಮಾಣದ ಮಳೆ ಮುಂದುವರೆಯಲಿದೆ. ಕಳೆದ ಎರಡು ವಾರಗಳಿಂದ ಶಾಲಾ-ಕಾಲೇಜುಗಳಿಗೆ ನಿರಂತರ ರಜೆ ಘೋಷಿಸಿದ ಕಾರಣ ಮಕ್ಕಳ ವಿದ್ಯಾಬ್ಯಾಸಕ್ಕೆ ಹಿನ್ನಡೆ ಆಗಿದೆ. ಈ ಅವಧಿಯಲ್ಲಿ ಕಲಿಸಬೇಕಿದ್ದ ಪಾಠವನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಂಡರೂ ಮಕ್ಕಳ ಮೇಲೆ ಒತ್ತಡ ಹೆಚ್ಚಾಗುವ ಬಗ್ಗೆ ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲ್ಲ.