ಭಟ್ಕಳ: ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಕರಿಕಲ್ ಶ್ರೀರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ನಡೆಸುತ್ತಿದ್ದಾರೆ.
ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್ ವಿ ದೇಶಪಾಂಡೆ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. `ಜನರಲ್ಲಿ ಧಾರ್ಮಿಕ ಭಾವನೆಯನ್ನು ಜಾಗೃತಗೊಳಿಸುವ ಮೂಲಕ ನಾಡಿನ ಶ್ರೇಯೋಭಿವೃದ್ಧಿಗಾಗಿ ಶ್ರೀಗಳು ವೃತ ಪ್ರಾರಂಭಿಸಿರುವುದು ಪುಣ್ಯದ ಕೆಲಸ\’ ಎಂದು ಆರ್ ವಿ ದೇಶಪಾಂಡೆ ಅಭಿಪ್ರಾಯಪಟ್ಟರು.