ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಶಿರಸಿ, ಸಿದ್ದಾಪುರ ಹಾಗೂ ಯಲ್ಲಾಪುರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದಿದೆ.
ಸೋಮವಾರ ಯಲ್ಲಾಪುರದಲ್ಲಿ 84.2 ಮಿಲಿ ಮೀಟರ್ ಮಳೆಯಾಗಿದೆ. ಸಿದ್ದಾಪುರ 28.4 ಮಿಲಿ ಮೀಟರ್, ಶಿರಸಿ 21.5 ಮಿಲಿ ಮೀಟರ್ ಮಳೆಯಾಗಿದೆ. ಜೊಯಿಡಾ 21.4, ಹೊನ್ನಾವರ 5.6, ದಾಂಡೇಲಿ 13.0, ಕುಮಟಾ 8.2, ಹಳಿಯಾಳ 3.6 ಮಿಲಿ ಮೀಟರ್ ಮಳೆಯಾಗಿದೆ. ಭಟ್ಕಳದಲ್ಲಿ ಮಳೆಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಒಟ್ಟು 17 ಮನೆಗಳಿಗೆ ಮಳೆಯಿಂದ ಹಾನಿಯಾಗಿದೆ. ಅದರಲ್ಲಿ 5 ಮನೆಗಳಿಗೆ ತೀವ್ರ ಹಾನಿ, 12 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಕಾರವಾರದ 2 ಮತ್ತು ಕುಮಟಾದಲ್ಲಿ 1 ಸೇರಿದಂತೆ ಒಟ್ಟು 3 ಕಾಳಜಿ ಕೇಂದ್ರಗಳಲ್ಲಿ 119 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ.
ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿ ನೋಡಿ..