ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನಲೆಯಲ್ಲಿ ಅಗಸ್ಟ 1ರಂದು ಗುರುವಾರ ವಿವಿಧ ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ.
ಅಗಷ್ಟ್ 2ರವರೆಗೂ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದರಿಂದ ಮಕ್ಕಳಿಗೆ ಶಾಲೆಗೆ ತೆರಳಲು ಅಸಾಧ್ಯ ಎಂದು ಶಿಕ್ಷಣಾಧಿಕಾರಿಗಳು ವರದಿ ಸಲ್ಲಿಸಿದ್ದಾರೆ. ಹೀಗಾಗಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಹಾಗೂ ಜೊಯಿಡಾ ತಾಲೂಕಿನ ಶಾಲೆಗಳಿಗೆ ಈ ರಜೆ ಘೋಷಣೆಯಾಗಿದೆ. ಈ ತಾಲೂಕಿನ ಅಂಗನವಾಡಿಗಳಿಗೂ ಈ ರಜೆ ಸಿಗಲಿದೆ. ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ಜೊತೆ ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಈ ರಜೆ ನಿಯಮ ಅನ್ವಯ. ಉಳಿದ ತಾಲೂಕುಗಳಲ್ಲಿ ಮಳೆ ಪ್ರಮಾಣ ಕಡಿಮೆ ಇರುವ ಕಾರಣ ಅಲ್ಲಿನ ಶಾಲೆಗಳಿಗೆ ಮಳೆ ರಜೆ ಇಲ್ಲ.