ಹೊನ್ನಾವರ: ಗೇರುಸೊಪ್ಪ ಜಲಾಶಯಕ್ಕೆ ಗುರುವಾರ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಭೇಟಿ ನೀಡಿ ಜಲಾಶಯದ ನೀರಿನ ಮಟ್ಟ ಪರಿಶೀಲಿಸಿದರು.
ನೀರಿನ ಒಳಹರಿವು ಹಾಗೂ ವಿದ್ಯುತ್ ಉತ್ಪಾದನೆಯ ಬಗ್ಗೆ ಅವರು ಅಲ್ಲಿನ ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಣೆಕಟ್ಟಿನ ಮೇಲ್ಬಾಗದಿಂದ ವೀಕ್ಷಿಸಿದ ಅವರು ಹೆಚ್ಚುವರಿ ನೀರನ್ನು ಹೊರಬಿಟ್ಟಾಗ ಆಗಬಹುದಾದ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಸ್ಥಳೀಯರಿಗೆ ಯಾವುದೇ ಸಮಸ್ಯೆ ಆಗದಂತೆ ತಡೆಯುವಂತೆ ಅಣೆಕಟ್ಟು ಅಧಿಕಾರಿಗಳಿಗೆ ಸೂಚಿಸಿದರು.