ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಉತ್ತರ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗಿದೆ.
ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ವಿಮಾ ಕಂತನ್ನು ಪಾವತಿಸಲು ಆಗಸ್ಟ್ 16 ಕೊನೆದಿನ. ಅಡಿಕೆ, ಮಾವು ಮತ್ತು ಕರಿಮೆಣಸು ಬೆಳೆಗಳಿಗೆ ಪ್ರೀಮಿಯಂ ತುಂಬುವ ಮೂಲಕ ಈ ಯೋಜನೆಗೆ ಒಳಪಡಬಹುದು.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ತೋಟಗಾರಿಕಾ ಇಲಾಖೆ ಕಚೇರಿಯನ್ನು ಸಂಪರ್ಕಿಸಿ.