ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ತನಿಖೆಗೆ ರಾಜ್ಯಪಾಲ ಥಾವರಚಂದ್ ಗೆಹಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ ಜಿಲ್ಲಾ ಕಾಂಗ್ರೆಸ್ ಎಲ್ಲಡೆ ಪ್ರತಿಭಟನೆ ನಡೆಸಿದೆ.
ಕಾರವಾರದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿವಿಧ ತಾಲೂಕುಗಳಿಂದ ಜನ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರಕಾರ, ರಾಜ್ಯಪಾಲ ಥಾವರಚಂದ್ ಗೆಹಲೋಟ್, ಬಿಜೆಪಿ-ಜೆಡಿಎಸ್ ಮೈತ್ರಿ ಹಾಗೂ ಬಿಜೆಪಿ ನಾಯಕರನ್ನು ವಿರೋಧಿಸುವ ಫಲಕಗಳನ್ನು ಹಿಡಿದು ಪ್ರತಿಭಟನೆ ಮಾಡಿದರು.
ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸಿದ ಪ್ರತಿಭಟನಾಕಾರರು ಬಿಜೆಪಿ ನಾಯಕರ ವಿರುದ್ಧ ಘೋಷಣೆ ಹಾಕಿದರು.