ಸಿದ್ದಾಪುರದ ವಾಜಗದ್ದೆಯ ದುರ್ಗಾವಿನಾಯಕ ದೇವಸ್ಥಾನದ ಎದುರು ಹಾಗೂ ಮುಠ್ಠಳ್ಳಿಯಲ್ಲಿ ಅಳವಡಿಸಿದ್ದ ಸೋಲಾರ ಲೈಟಿನ ಬ್ಯಾಟರಿ ಕದ್ದ ( Theft ) ಕಳ್ಳ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಆತನ ಹುಡುಕಾಟ ನಡೆಸಿದ್ದಾರೆ.
ಬಿಳಿ ಬಣ್ಣದ ಸ್ಕೂಟಿಯಲ್ಲಿ ಬಂದ ಇಬ್ಬರು ( Theft ) ಬ್ಯಾಟರಿ ಕದ್ದಿದ್ದಾರೆ. ಇಬ್ಬರು ಸಹ ಹೆಲ್ಮೆಟ್ ಧರಿಸಿದ್ದು ಅವರ ಮುಖ ಕಾಣುತ್ತಿಲ್ಲ. ವಾಜಗದ್ದೆಯ ದುರ್ಗಾವಿನಾಯಕ ದೇವಸ್ಥಾನದವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ಕ್ಯಾಮರಾದಲ್ಲಿ ಸೆರೆಯಾದ ವಿಡಿಯೋ ಹಸ್ತಾಂತರಿಸಿದ್ದಾರೆ. ಗ್ರಾಮ ಪಂಚಾಯತದಿAದ ಸಹ ದೂರು ನೀಡುವ ಬಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಹಾರ್ಸಿಕಟ್ಟಾ ಗ್ರಾಪಂ ವ್ಯಾಪ್ತಿಯ ಅಶೋಕ ಪ್ರೌಢಶಾಲೆ ಹತ್ತಿರ ಎರಡು ಕಡೆ, ಹೊನ್ನೆಹದ್ದ ಹಾಗೂ ಮಾನಿಹೊಳೆ ಬಸ್ ನಿಲ್ದಾಣದ ಸಮೀಪ ಅಳವಡಿಸಿದ್ದ ಸೋಲಾರ್ ಲೈಟಿನ ಬ್ಯಾಟರಿಯನ್ನು ಕಳ್ಳರು ದೋಚಿದ್ದರು. ಈ ಬಗ್ಗೆ ದೂರು ನೀಡಿದರೂ ಕ್ರಮವಾಗಿಲ್ಲ ಎಂಬುದು ಜನರ ಆರೋಪ. ರಾತ್ರಿ ವೇಳೆ ಪೊಲೀಸರು ಗಸ್ತು ತಿರುಗಬೇಕು ಎಂದು ಆ ಭಾಗದವರು ಆಗ್ರಹಿಸಿದ್ದಾರೆ.