ರಸ್ತೆ ಹಾಗೂ ಬಸ್ಸಿನ ವ್ಯವಸ್ಥೆ ಮಾಡುವಂತೆ ಯಲ್ಲಾಪುರ ತಾಲೂಕಿನ ಕಿರವತ್ತಿ ಭಾಗದವರು ಶುಕ್ರವಾರ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಕೂಡಲೇ ತಮ್ಮ ಫೋನ್ ತೆಗೆದುಕೊಂಡು ಸಂಸದ ಕಾಗೇರಿ ಡಿಪೋ ಮುಖ್ಯಸ್ಥರಿಗೆ ಕರೆ ಮಾಡಿ ಬಸ್ಸಿನ ಸಮಸ್ಯೆ ಬಗೆಹರಿಸಲು ಸೂಚಿಸಿದರು.
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿ ಕೊಣಮಡ್ಡಿ ಭಾಗದಲ್ಲಿ ರಸ್ತೆ ನಿರ್ಮಿಸುವ ಅಗತ್ಯವಿರುವ ಬಗ್ಗೆ ಆ ಭಾಗದ ಗ್ರಾ ಪಂ ಸದಸ್ಯರು ಮನವಿ ಸಲ್ಲಿಸಿದರು. ಈ ಭಾಗದ ರಸ್ತೆ ಸಂಪೂರ್ಣ ಹದಗೆಟ್ಟಿರುವ ಬಗ್ಗೆ ಫೋಟೋಗಳನ್ನು ಪ್ರದರ್ಶಿಸಿದರು. ಇದರೊಂದಿಗೆ ಇನ್ನಿತರ ಕುಂದು-ಕೊರತೆಗಳ ಬಗ್ಗೆ ಚರ್ಚಿಸಿದರು. ತೆಂಗಿನಗೇರಿ ಹಾಗೂ ಸುತ್ತಲಿನ ಗ್ರಾಮಕ್ಕೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದ ಕಾರಣ ಶಾಲಾ ಮಕ್ಕಳ ಜೊತೆ ಸಾರ್ವಜನಿಕರಿಗೂ ಸಮಸ್ಯೆ ಆಗುತ್ತಿರುವ ಬಗ್ಗೆ ವಿವರಿಸಿದರು.