ಶಿರಸಿ: ನಗರದ ರಾಮನಬೈಲ್ ವಾರ್ಡಿನಲ್ಲಿ ಮಳೆಗಾಲದಲ್ಲಿಯೇ ಚರಂಡಿ ಗಟಾರ ನಿರ್ಮಾಣ ಹಾಗೂ ಸಿಡಿ ನಿರ್ಮಾಣ ಕಾಮಗಾರಿ ಕಳಪೆಯಾಗಿದೆ. ಮಳೆಗಾಲದ ಅವಧಿಯಲ್ಲಿಯೇ ಕೆಲಸ ಮಾಡುತ್ತಿರುವುದು ಸಾರ್ವಜನಿಕರ ಅಸಮಧಾನಕ್ಕೆ ಕಾರಣವಾಗಿದೆ. ಮಳೆಗಾಲದಲ್ಲಿಯೂ ಕಾಮಗಾರಿ ನಡೆಸುತ್ತಿರುವ ಬಗ್ಗೆ ಕಾರಣ ಕೇಳಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂಬುದು ಜನರ ದೂರು.
`ಮಳೆಗಾಲದಲ್ಲಿ ಕಾಮಗಾರಿ ನಡೆಸುವುದರಿಂದ ಕೆಲಸ ಗುಣಮಟ್ಟದಿಂದ ಕೂಡಿರುವುದಿಲ್ಲ. ಇದರಿಂದ ಸರ್ಕಾರಿ ಹಣ ಬಳಕೆಯಾದರೂ ಜನರಿಗೆ ಉಪಯೋಗವಾಗುತ್ತಿಲ್ಲ\’ ಎಂದು ದಲಿತ ಸಮಿತಿ ಅಧ್ಯಕ್ಷ ಕೃಷ್ಣ ಎಚ್. ಬಳಿಗಾರ ಆಕ್ರೋಶ ವ್ಯಕ್ತಪಡಿಸಿದರು. `ಇಲ್ಲಿ ಶಿರಸಿ ನಗರಸಭೆ ಹಾಗೂ ಗುತ್ತಿಗೆದಾರರು ಅವರಿಚ್ಚೆಯಂತೆ ಕೆಲಸ ಮಾಡುತ್ತಿದ್ದಾರೆ. ಕೂಡಲೇ ಈ ಕಾಮಗಾರಿ ನಿಲ್ಲಿಸಿ ಅವ್ಯವಹಾರದ ಬಗ್ಗೆ ತನಿಖೆ ನಡೆಯಬೇಕು\’ ಎಂಬುದು ಅವರ ಆಗ್ರಹ. ಈ ಬಗ್ಗೆ ಜಿಲ್ಲಾಡಳಿತಕ್ಕೂ ಪತ್ರ ಬರೆಯುವುದಾಗಿ ಅವರು ಹೇಳಿದ್ದಾರೆ.