ಕಾರವಾರ: ಕಾಳಿ ನದಿಗೆ ಅಡ್ಡಲಾಗಿರುವ ಸೇತುವೆಗೆ ಅಳವಡಿಸಿದ್ದ ತಾತ್ಕಾಲಿಕ ಬೀದಿ ದೀಪಗಳು ಉರಿಯುತ್ತಿಲ್ಲ. ಇದರಿಂದ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ.
ಕೆಲ ದಿನಗಳ ಹಿಂದೆ ತಾತ್ಕಾಲಿಕವಾಗಿ ಇಲ್ಲಿ ಬೀದಿ ದೀಪ ಅಳವಡಿಸಲಾಗಿತ್ತು. ಆದರೆ, ಅದು ಸಹ ಇದೀಗ ಬೆಳಗುತ್ತಿಲ್ಲ. `ರಾಷ್ಟ್ರೀಯ ಹೆದ್ದಾರಿ ಸುರಕ್ಷತೆ ಬಗ್ಗೆ ನಿರ್ಲಕ್ಷ ಮಾಡುವುದು ಸರಿಯಲ್ಲ\’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷರಾದ ರಾಜಾ ನಾಯ್ಕ ಹೇಳಿದ್ದಾರೆ. ಕೂಡಲೇ ಬೀದಿ ದೀಪ ಅಳವಡಿಸಬೇಕು ಎಂದವರು ಆಗ್ರಹಿಸಿದ್ದಾರೆ.