ದಾಂಡೇಲಿ :
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ ದಾಂಡೇಲಿ ತಾಲೂಕು ಘಟಕದ 2024 -2029ನೇ ಅವಧಿಗೆ ಅಧ್ಯಕ್ಷರಾಗಿ ಸತತ ಎರಡನೇ ಬಾರಿಗೆ ತಾಲೂಕಿನ ಅಂಬೇವಾಡಿಯ ಗೌಳಿವಾಡದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರು ಆಗಿರುವ ಸುರೇಶ ನಾಯಕ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಖಜಾಂಚಿಯಾಗಿ ಕಂದಾಯ ಇಲಾಖೆಯ ಗೌಡಪ್ಪ ಬಾನಕದಿನ್ನಿ ಹಾಗೂ ಸಂಘದ ರಾಜ್ಯ ಪರಿಷತ್ ಸದಸ್ಯರಾಗಿ ಕಾರ್ಮಿಕ ವಿಮಾ ಆಸ್ಪತ್ರೆಯ ಕಚೇರಿ ಅಧಿಕ್ಷಕರಾದ ವಿನಾಯಕ ಸಿ.ಪವಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.