
ದಾಂಡೇಲಿ : ನಗರದ ಜೆ.ಎನ್ ರಸ್ತೆಯಲ್ಲಿರುವ ಶ್ರೀ ಮಾರುತಿ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ಅನ್ನಕೂಟ ಮಹೋತ್ಸವ ಶ್ರದ್ಧಾ ಭಕ್ತಿಯಿಂದ ಭಾನುವಾರ ಸಂಜೆ ಸಂಪನ್ನಗೊಂಡಿತು.
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ದೀಪಾವಳಿ ಹಬ್ಬದ ನಂತರ ಶ್ರೀ ಠಾಕೂರ್ ಜಿಯವರ ಪ್ರೇರಣೆಯಿಂದ ಶ್ರೀ ಮಾರುತಿ ಮಂದಿರದಲ್ಲಿ ವಿಶೇಷ ಪೂಜೆ, ಸಾಮೂಹಿಕ ಭಜನೆ ಹಾಗೂ ೫೬ ಬಗೆಯ ವಿವಿದ ಭೋಜನಗಳ ನೈವೇದ್ಯಗಳನ್ನು ಮಾರುತಿಗೆ ಅರ್ಪಣೆ ಮಾಡಿದರು. ಬಳಿಕ ಮಹಾಮಂಗಳಾರತಿ ಪೂಜಾ ಕಾರ್ಯಕ್ರಮವು ಜರುಗಿತು.
ದೇವಸ್ಥಾನದ ಪ್ರಧಾನ ಅರ್ಚಕರಾದ ಗಜೇಂದ್ರ ಶರ್ಮಾ ಅವರ ಪೌರೋಹಿತ್ಯದಲ್ಲಿ ನಡೆದ ಈ ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗುವುದರ ಜೊತೆಗೆ ಪ್ರಸಾದವನ್ನು ಸ್ವೀಕರಿಸಿದರು.