
ಹೊನ್ನಾವರ:
ತಾಲೂಕಿನ ಕೆರೆಕೋಣ ನಿವಾಸಿ ಪ್ರಶಾಂತ ಭಟ್ ಎಂಬುವವರ ಹೊನ್ನಾವರದಿಂದ ವಾಪಾಸ್ ತೆರಳುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದ್ದು ಕಾಲಿನ ಭಾಗಕ್ಕೆ ಗಾಯವಾಗಿದೆ.
ಸಂತೆಗುಳಿ ಸಮೀಪ ಘಟನೆ ನಡೆದಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅರಣ್ಯ ಇಲಾಖೆಗೆ ವಿಷಯ ತಿಳಿಸಲಾಗಿದ್ದು ಅಧಿಕಾರಿಗಳು ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದಾರೆ.