
ಹಳಿಯಾಳ :
ಶಾಲೆಯಲ್ಲಿ ಮೂತ್ರ ವಿಸರ್ಜೆನೆಗೆ ತೆರಳಿದಾಗ ತುಂಡಾದ ವಿದ್ಯುತ್ ಸರ್ವಿಸ್ ವೈರ್ ತಾಗಿ ಎರಡನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಬಸವರಾಜ ಗೌಳಿ (8)
ಸ್ಥಳದಲ್ಲೇ ಸಾವನಪ್ಪಿದ ಘಟನೆ ನಡೆದಿದೆ.
ಆಕಸ್ಮಿಕವಾಗಿ ನಡೆದ ದುರ್ಘಟನೆಯಿಂದ ಗ್ರಾಮವೆಲ್ಲ ದುಃಖದ ಮಡುವಿನಲ್ಲಿ. ತಂಡೊಪ ತಂಡವಾಗಿ ಶಾಲೆಗೆ ಭೇಟಿ ನೀಡಿದರು. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ
ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ದುರ್ಘಟನೆ ನಡೆದಿದೆ.
ಎಂದಿನಂತೆ 11 ಗಂಟೆ ಸುಮಾರಿಗೆ ವಿಶ್ರಾಂತಿ ಸಮಯದಲ್ಲಿ ಮೂತ್ರ ವಿಸರ್ಜೆನೆಗೆ ತೆರಳಿದಾಗ ತೆರೆದ ಶೌಚಾಲಯದಲ್ಲಿ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ತಹಶಿಲ್ದಾರ್ ಪ್ರವೀಣ ಹುಚ್ಚನ್ನವರ , ಸಿಪಿಐ ಜಯವಂತ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು . ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ.
ಘಟನೆಯ ವಿಷಯ ತಿಳಿದ ಶಾಸಕ ಆರ್ ವಿ ದೇಶಪಾಂಡೆ ಅವರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮೃತ ಬಾಲಕಿಯ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದರು.