
ಹೊನ್ನಾವರ:
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಾಲಿಕೇರಿ- ಹಳದಿಪುರ ಬಳಿ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ವ್ಯಕ್ತಿ ಓರ್ವನಿಗೆ ವಾಹನ ಡಿಕ್ಕಿ ಹೊಡೆದು ಆತ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ಮೃತ ವ್ಯಕ್ತಿಗೆ ಅಂದಾಜು 40ರಿಂದ 50 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ. ಹಳದಿ ಬಣ್ಣಸ ಟೀ ಶರ್ಟ್ ಧರಿಸಿದ್ದು ಆದರೆ ಇದುವರೆಗೆ ಆತನ ಗುರುತು ಪತ್ತೆತಾಗಿಲ್ಲ. ಅಪಘಾತದ ರಭಸಕ್ಕೆ ತಲೆ ಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಹೊನ್ನಾವರದ ಪೊಲೀಸ್ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಶವವನ್ನ ಹೊನ್ನಾವರ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.