
ಅಂಕೋಲಾ:
ತಾಲೂಕಿನ ಕನಸಿಗದ್ದೆಯಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕನ ತಲೆಯಮೇಲೆ ಗೇಟ್ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಆಜಮ್ ಜಾವೇದ್ ಶೇಕ್ (5) ಮೃತ ಬಾಲಕನಾಗಿದ್ದಾನೆ. ಆಟವಾಡುತ್ತಿದ್ದ ಸಂದರ್ಭದಲ್ಲಿ ಮನೆಯ ಮುಂದಿನ ಗೇಟ್ ಮುರಿದು ತಲೆಯ ಮೇಲೆ ಬಿದ್ದ ಪರಿಣಾಮ ಬಾಲಕನನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ತೀವ್ರ ಗಾಯವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಸಾಗಿಸಬೇಕೆಂದು ತಿಳಿಸಿದಾಗ ಮಣಿಪಾಲದ ಆಸ್ಪತ್ರೆಗೆ ತೆರಳುತ್ತಿರುವ ಸಂದರ್ಭದಲ್ಲಿ ಮಾರ್ಗ ಮಧ್ಯೆ ಬಾಲಕ ಸಾವನ್ನಪ್ಪಿದ್ದಾನೆ. ಪ್ರಕರಣ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.