
ಸಮುದ್ರದಲ್ಲಿ ವಿದ್ಯಾರ್ಥಿಗಳ ಮೋಜು ಮಸ್ತಿ, ಮೂವರು ನಾಪತ್ತೆ. ಓರ್ವ ವಿದ್ಯಾರ್ಥಿನಿ ಸಾವು.
ಮುರುಡೇಶ್ವರ :
ಸಮುದ್ರದಲ್ಲಿ ಈಜಲು ತೆರಳಿದ ಕೋಲಾರ ಮೂಲದ ಮೂವರು ಪ್ರವಾಸಿ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು, ಓರ್ವ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ.
ಶ್ರಾವಂತಿ (15) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಇನ್ನು ಮೂವರು ವಿಧ್ಯಾರ್ಥಿಗಳ ರಕ್ಷಣೆ ಮಾಡಲಾಗಿದ್ದು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದೀಕ್ಷಾ, ಲಾವಣ್ಯ, ಲಿಪಿಕಾ ನಾಪತ್ತೆಯಾದ ವಿದ್ಯಾರ್ಥಿಗಳಾಗಿದ್ದಾರೆ. ಕೋಲಾರದ ಮುಳಬಾಗಿಲು ಮೂಲದ 54 ವಿದ್ಯಾರ್ಥಿಗಳು ಮುರುಡೇಶ್ವರ ಪ್ರವಾಸಕ್ಕೆ ಆಗಮಿಸಿದ್ದರು.ಸಂಜೆ ವೇಳೆ ಈಜುವಾಗ ಘಟನೆ ನಡೆದಿದೆ. ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,ನಾಪತ್ತೆಯಾದವರ ಶೋಧ ಕಾರ್ಯಚರಣೆ ನಡೆಸಲಾಗುತ್ತಿದೆ.