
ಕಾರವಾರ:
ರಾಜ್ಯ ಸರಕಾರವು ಹಿಂದುಳಿದ ವರ್ಗಗಳ ನಿಗಮ ಮಂಡಳಿಗಳಿಗೆ ಅನುದಾನ ಬಿಡುಗಡೆ ಮಾಡದೇ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿಯ ಒಬಿಸಿ ಮೋರ್ಚಾ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿಯ ಎದುರು ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಪಲ್ಷದ ಬಾವುಟ ಹಿಡಿದು ಘೋಷಣೆಗಳನ್ನು ಕೂಗಿದರು. ಬಳಿಕಸರಕಾರ ಎಚ್ವೆತ್ತು ಅನುದಾನ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ಹೋರಾಟ ಉಗ್ರ ರೂಪಕ್ಕೆ ತಿರುಗುತ್ತದೆ ಎಂದು ಉಲ್ಲೇಖಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಒಬಿಸಿ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರ ನಾಯ್ಕ ಮಾತನಾಡಿ, ಕಾಂಗ್ರೆಸ ಸರಕಾರ ಹಿಂದುಳಿದ ವರ್ಗಕ್ಕೆ ದ್ರೋಹ ಮಾಡಿದೆ. ಈ ಕುರಿತು ರಾಜ್ಯಾದಂತ ಹೋರಾಟ ನಡೆಯುತ್ತಿದೆ. ರಾಜ್ಯದಲ್ಲಿ ಶೇ. ೬೦ ರಷ್ಟಿದ್ದಾರೆ. ಹೀಗಾಗಿ ದೇವರಾಜು ಅರಸ್ ಅಭಿವೃದ್ಧಿ ನಿಗಮದಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಉನ್ನತ ವ್ಯಾಸಾಂಗಕ್ಕೆ ಧನಸಹಾಯ, ಗಂಗಾ ಕಲ್ಯಾಣ ಯೋಜನೆ ಇದ್ದವು. ಆದರೆ ಅದನ್ನು ಸಂಪೂರ್ಣ ಸ್ತಗಿತಗೊಳಿಸಿ ಕೇವಲ ಪಂಚ ಗ್ಯಾರಂಟಿ ಯೋಜನೆಗೆ ಹಣ ವ್ಯಯ ಮಾಡುತ್ತಿದ್ದಾರೆ. ಪಂಚ ಗ್ಯಾರಂಟಿ ಮಾಡುವುದಕ್ಕೆ ವಿರೋಧ ಇಲ್ಲ. ಆದರೆ ನಿಗಮಗಳಿಗೆ ಅನ್ಯಾಯ ಮಾಡುವುದು ಸರಿಯಲ್ಲ. ನಿಗಮಕ್ಕೆ ಹಣ ನೀಡಲು ಸಾದ್ಯವಾಗದಿದ್ದರೆ ನಿಗಮಗಳನ್ನು ಬಂದ್ ಮಾಡಿ ಸರಕಾರ ದಿವಾಳಿಯಾಗಿದೆ ಎಂದು ತಿಳಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಭಾಗೀಯ ಪ್ರಭಾರಿ ಕುಬೇರಪ್ಪ, ಬಜೆಪಿಯ ಜಿಲ್ಲಾ ವಕ್ತಾರ ನಾಗರಜ ನಾಯಕ, ಬಿಜೆಪಿಯ ಜಿಲ್ಲಾಧ್ಯಕ್ಷ ಎನ್ಎಸ್ ಹೆಗಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ, ಸುನೀಲ ಸೋನಿ, ನಾಗೇಶ ಕುರಡೇಕರ, ಸುಭಾಷ ಗುನಗಿ, ಮನೋಜ ಭಟ್, ಸಂಜಯ ಸಾಳುಂಕೆ, ಕಿಶನ್ ಕಾಂಬ್ಳೆ ಹಾಗೂ ನಗರಸಭೆಯ ಸದಸ್ಯರು ಇದ್ದರು.