
ಕಾರವಾರ:
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಬರೋಬ್ಬರಿ 32,207 ಪ್ರಕರಣಗಳನ್ನು ಇತ್ಯರ್ಥ ಮಾಡಲಾಯಿತು.
ಜಿಲ್ಲೆಯಾದ್ಯಂತ ಒಟ್ಟೂ 29 ಪೀಠಗಳಲ್ಲಿ 26,712 ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ 5,495 ಪ್ರಕರಣಗಳಲ್ಲಿ ಸೇರಿದಂತೆ ಒಟ್ಟೂ 32,207 ಪ್ರಕರಣಗಳು ಇತ್ಯರ್ಥ ಮಾಡಲಾಯಿತು.
ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಲ ಮರುಪಾವತಿ, ಪರಿಹಾರ, ದಂಡ ಹಾಗೂ ಇತ್ಯಾದಿ ಹಣಕಾಸಿನ ಪ್ರಕರಣಗಳು ಸೇರಿದಂತೆ ಒಟ್ಟು ರೂಪಾಯಿ 30,76,76,175 ರೂ. ದಂಡ ಸಂಗ್ರಹ ಮಾಡಲಾಯಿತು.
ನ್ಯಾಯಾಲಯದ ಮೆಟ್ಟಿಲೇರಿದ 2 ಕೌಟುಂಬಿಕ ಪ್ರಕರಣಗಳು ಸಿದ್ದಾಪುರ ಮತ್ತು ಮುಂಡಗೋಡ ಸಿವಿಲ್ ನ್ಯಾಯಾಲಯದಲ್ಲಿ ರಾಜಿಯಾಗಿ ದಂಪತಿಗಳು ಒಟ್ಟಿಗೆ ಜೀವನ ನಡೆಸಲು ಒಪ್ಪಿಕೊಂಡ ಬೆಳವಣಿಗೆ ನಡೆಯಿತು.
ಈ ಬಾರಿಯ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಜಿಲ್ಲೆಯ ಒಟ್ಟು 37 ಕುಟುಂಬದ ಆಸ್ತಿ ವಿಭಜನೆಯ ಪ್ರಕರಣಗಳು ಹಾಗೂ 484 ಚೆಕ್ ಬೌನ್ಸ್ ಪ್ರಕರಣಗಳು ಮತ್ತು 61 ಮೋಟಾರು ಅಪಘಾತ ಪರಿಹಾರ ಪ್ರಕರಣಗಳು ರಾಜಿಯಾಗಿದ್ದು ಇವುಗಳಲ್ಲಿ 1 ಆಸ್ತಿ ವಿಭಜನೆ ಪ್ರಕರಣ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜಿಯಾಗಿ ಇತ್ಯರ್ಥಗೊಂಡಿರುವುದು ವಿಶೇಷವಾಗಿದೆ
ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ. ಎಸ್. ವಿಜಯಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.