
ಭಟ್ಕಳ:
ಹೆಚ್ಚೇನು ದಾಳಿಯಿಂದ ಐವರು ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ತಾಲೂಕಿನ ಬೆಳಕೆಯ ಜನತಾ ಕಾಲೋನಿ ಸಮೀಪ ನಡೆದಿದೆ.
ಮಂಜುನಾಥ ಮಾಸ್ತಿ ಮೊಗೇರ (70), ಪರಮೇಶ್ವರಿ ಮಂಜುನಾಥ ಮೊಗೇರ (60), ಭರತ ರಾಮಚಂದ್ರ ಮೊಗೇರ (21) ಸತೀಶ ಕರಿಯಪ್ಪ ನಾಯ್ಕ ಹೆಚ್ಚೇನು ದಾಳಿಯಿಂದ ಗಾಯಗೊಂಡಿದ್ದಾರೆ.
ಮನೆಯ ಗೇಟ್ ಬಳಿ ನಿಂತಿದ್ದ ವೇಳೆ ಏಕಾಏಕಿಯಾಗಿ ದಾಳಿ ಮಾಡಿದೆ. ಈ ಸಂದರ್ಭದಲ್ಲಿ ದಾಳಿಗೊಳಗಾದವರು ಅಸ್ವಸ್ಥಗೊಂಡರು. ತಕ್ಷಣ ಅವರನ್ನೆಲ್ಲ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.