
ಶಿರಸಿ:
ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ 7 ತಾಲೂಕು ಒಳಗೊಂಡ ಕದಂಬ ಕನ್ನಡ ಜಿಲ್ಲೆ ಮತ್ತು ಬನವಾಸಿ ತಾಲೂಕು ರಚನೆ ಮಾಡುವ ಕುರಿತು ವಿಧಾನ ಸಭೆ ಅಧಿವೇಶನದಲ್ಲಿ ಪ್ರಸ್ತಾವಿಸುವಂತೆ ಕದಂಬ ಕನ್ನಡ ಜಿಲ್ಲಾ ರಚನೆ ಮತ್ತು ಹಿತರಕ್ಷಣಾ ಟ್ರಸ್ಟ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಅವರು ಶಾಸಕ ಆರ್. ವಿ. ದೇಶಪಾಂಡೆ ಅವರಿಗೆ ಮನವಿ ಸಲ್ಲಿಸಿದರು
ಈ ಹೋರಾಟಕ್ಕೆ ಬೆಂಬಲ ನೀಡುವಂತೆ ವಿನಂತಿಸಿದರು. ಕದಂಬ ಕನ್ನಡ ಜಿಲ್ಲಾ ರಚನೆ ಮತ್ತು ಹಿತರಕ್ಷಣಾ ಟ್ರಸ್ಟ್ ಸದಸ್ಯರಾದ ವಿ ಎಂ
ಭಟ್ಟ, ಜಿ ಎಸ್ ಹೆಗಡೆ ಹಲಸರಿಗೆ, ಶಿವಾನಂದ ದೇಶಳ್ಳಿ, ನಾಗರಾಜ ಜೋಶಿ ಸೋಂದ, ಸಂತೋಷ ನಾಯ್ಕ ಬ್ಯಾಗದ್ದೆ ಇದ್ದರು.