
ಅಂಕೋಲಾ:
ವಯೋ ಸಹಜತೆಯಿಂದ ಮೃತರಾದ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ಅವರನ್ನು ಮಂಗಳವಾರ ಅವರ ಹುಟ್ಟುಇರಾದ ಹೊನ್ನಾಳ್ಳಿಯಲ್ಲಿ ಅತ್ಯಸಂಸ್ಕಾರ ಮಾಡಲಾಯಿತು.
ಶಾಸಕ ಸತೀಶ ಸೈಲ್, ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಪೊಲೀಸ್ ಅಧಿಕಾರಿಗಳು ಹಾಗೂ ಅಪಾರ ಅಭಿಮಾನಿಗಳು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.
ಪೊಲೀಸ್ ಬ್ಯಾಂಡ್ ಬಾರಿಸುವ ಮೂಲಕ ಮೂರು ಸುತ್ತು ಗುಂಡು ಹಾರಿಸಿ ಸಕಲ ಸರಕಾರಿ ಗೌರವಗಳೊಂದಿಗೆ ತುಳಸಿ ಗೌಡ ಅವರ ಅಂತ್ಯಕ್ರಿಯೆ ನಡೆಯಿತು.