
ಅಂಕೋಲಾ:
ವೃಕ್ಷ ಮಾತೆ ತುಳಸಿ ಗೌಡ ಅವರ ನಿಧನದ ಹಿನ್ನಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.
ಕರ್ನಾಟಕದ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ತುಳಸಿ ಗೌಡ ಅವರ ನಿಧನ ತೀವ್ರ ದುಃಖ ತಂದಿದೆ. ಅವರು ತಮ್ಮ ಇಡೀ ಬದುಕನ್ನು ಪ್ರಕೃತಿ ಪೋಷಣೆಗಾಗಿ ಮುಡಿಪಾಗಿಟ್ಟು, ಸಾವಿರಾರು ಗಿಡಗಳನ್ನು ನೆಟ್ಟು ಬೆಳೆಸಿ ನಮ್ಮ ಪರಿಸರವನ್ನು ಸಂರಕ್ಷಿಸಿದವರು. ಪರಿಸರ ರಕ್ಷಣೆಗೆ ಸದಾ ಮಾರ್ಗದರ್ಶನ ನೀಡುವ ಬೆಳಕಾಗಿ ಅವರು ಉಳಿಯುತ್ತಾರೆ. ಅವರ ಕೆಲಸಗಳು ನಮ್ಮ ಭೂಗ್ರಹವನ್ನು ರಕ್ಷಿಸಲು ತಲೆಮಾರುಗಳಿಗೆ ಪ್ರೇರಣೆ ನೀಡುತ್ತಿರುತ್ತವೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.