
ದಾಂಡೇಲಿ- ಕರ್ನಾಟಕ ಸರಕಾರವು ಒಂಬತ್ತು ಟ್ರಸ್ಟಗಳಿಗೆ ಹೊಸದಾಗಿ ಅಧ್ಯಕ್ಷರನ್ನು ನೇಮಿಸಿದ್ದು, ಬೆಳಗಾವಿಯಲ್ಲಿರುವ ಶ್ರೀ ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್ಗೆ ಖ್ಯಾತ ಕವಯಿತ್ರಿ ಮತ್ತು ಕಥೆಗಾರ್ತಿ, ಡಾ. ವಿನಯಾ ಜಿ ನಾಯಕ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಅವರು ಇಲ್ಲಿಯ ಸರಕಾರಿ ಪ್ರಥಮ ದರ್ಜೇ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದು, ಅವರಿಗೆ ಪ್ರಾಂಶುಪಾಲರು, ಬೋಧಕ/ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ತಿಳಿಸಿದ್ದಾರೆ.