
ದಾಂಡೇಲಿ :
ಗಾಂಧಿನಗರದ ಆಶ್ರಯ ಕಾಲೋನಿಯಲ್ಲಿ ಅವಿವಾಹಿತ ಯುವಕನೋರ್ವ ನೇಣಿಗೆ ಶರಣಾದ ಘಟನೆ ನಿನ್ನೆ ಭಾನುವಾರ ತಡರಾತ್ರಿ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ.
ಗಾಂಧಿನಗರದ ಆಶ್ರಯ ಕಾಲೋನಿಯ ನಿವಾಸಿಯಾಗಿರುವ ಮಂಜುನಾಥ ಮಹದೇವ ಮಾಶಾಳ (ವ:24) ಎಂಬತಾನೆ ನೇಣಿಗೆ ಶರಣಾದ ಯುವಕನಾಗಿದ್ದಾನೆ. ಈತ ಮನೆಯ ಕೊಠಡಿಯ ಒಳಗಡೆ ನೇಣಿಗೆ ಶರಣಾಗಿರುತ್ತಾನೆ. ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ಮೃತ ದೇಹವು ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿದ್ದು ಮರಣೋತ್ತರ ಪರೀಕ್ಷೆ ನಡೆಯಲಿದೆ. ಸೋಮವಾರ ಬೆಳಗ್ಗೆ ತಹಶೀಲ್ದಾರ್ ಶೈಲೇಶ್ ಪರಮಾನಂದ ಅವರು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ. ಸಾರ್ವಜನಿಕ ಆಸ್ಪತ್ರೆಗೆ ನಗರಸಭೆಯ ಸದಸ್ಯೆ ರುಕ್ಮಿಣಿ ಬಾಗಡೆ ಅವರು ಭೇಟಿ ನೀಡಿದ್ದಾರೆ.