
ಹೊನ್ನಾವರ:
ಇಲ್ಲಿನ ಗೇರುಸೊಪ್ಪ -ಸಾಗರ ರಸ್ತೆಯ ಸುಳು ಮುರ್ಕಿ
ಕ್ರಾಸ್ ಬಳಿ ಲಾರಿ ಪಲ್ಟಿಯಾಗಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ.
ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಬ್ಬಿಣದ ವಸ್ತುಗಳನ್ನು ತುಂಬಿಕೊಂಡು ಶಿವಮೊಗ್ಗದಿಂದ ಹೊನ್ನಾವರದಡೆಗೆ ಬರುತ್ತಿದ್ದ ಲಾರಿ ಪಲ್ಟಿಯಾಗಿದೆ. ಮೃತರು ಮತ್ತು ಗಾಯಾಳುಗಳು ಬಿಹಾರ ಮೂಲದವರೆಂದು ತಿಳಿದುಬಂದಿದೆ. ಗಾಯಳುಗಳನ್ನು ಹೊನ್ನಾವರ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.