ಭಟ್ಕಳ :
ಪಟ್ಟಣದ ಶಂಸುದ್ದಿನ್ ಸರ್ಕಲ್ ಬಳಿ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ವೃದ್ಧೆಯೋರ್ವಳು ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.
ಲಕ್ಷ್ಮೀ ಜಟ್ಟ ನಾಯ್ಕ (70) ಮೃತ ಮಹಿಳೆ. ಮೃತರು ಶಿರಾಲಿ ಚಿತ್ರಾಪುರ ನಿವಾಸಿ ಎಂದು ತಿಳಿದು ಬಂದಿದೆ.
ಭಟ್ಕಳದಿಂದ ಬೆಂಗಳೂರಿಗೆ ತೆರಳುವ ಖಾಸಗಿ ಬಸ್ ಹೊನ್ನಾವರ ಕಡೆಯಿಂದ ಬಂದು ಭಟ್ಕಳ ಶಂಸುದ್ದಿನ್ ಸರ್ಕಲ್ ನಲ್ಲಿ ಯೂಟರ್ನ್ ತೆಗದುಕೊಳ್ಳುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡ ವೃದ್ಧೆಯನ್ನ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಭಟ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.