
ಕಾರವಾರ:
ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾ. 9 ರಂದು ಬೆಳಿಗ್ಗೆ 6 ಗಂಟೆಗೆ ಕಾರವಾರ ರವೀಂದ್ರನಾಥ ಟಾಗೋರ ಕಡಲ ತೀರದಿಂದ ಮ್ಯಾರಾಥಾನ್ ಓಟವನ್ನು ಆಯೋಜಿಸಲಾಗಿದೆ.
ಮಾದಕ ದ್ರವ್ಯ ಹಾಗೂ ಸೈಬರ್ ಅಪರಾಧ ಮುಕ್ತ ಕರ್ನಾಟಕ ಘೋಷವಾಖ್ಯದಡಿ ನಡೆಯುವ 5 ಕಿಲೋಮೀಟರ್ ಮ್ಯಾರಾಥಾನ್ ಓಟದಲ್ಲಿ ಸಾರ್ವಜನಿಕರು ಕ್ಯೂಆರ್ ಕೋಡ್ ಸ್ಕಾö್ಯನ್ ಮಾಡುವ ಮೂಲಕ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು. ಮ್ಯಾರಾಥಾನ್ ಓಟದಲ್ಲಿ ವಿಜೇತರಾಗುವ ಮೂರು ಓಟಗಾರರಿಗೆ ಆಕರ್ಷಕ ನಗದು ಬಹುಮಾನ, ಪದಕ ಹಾಗೂ ಪ್ರಶಸ್ತಿ ಪತ್ರವನ್ನು ನೀಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.