
ಕಾರವಾರ:
ಮಾರ್ಚ್ ತಿಂಗಳಿನಿಂದ ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ವಿತರಿಸಲಾಗುವ ಪಡಿತರ ಅಕ್ಕಿಯ ದುರುಪಯೋಗವಾಗದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ಡಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಪಡಿತರ ಚೀಟಿದಾರರಿಗೆ ವಿತರಿಸಿದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಅನಧಿಕೃತವಾಗಿ ದಾಸ್ತಾನು, ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಕ್ಕಿ ವಿತರಣೆ ಕುರಿತಂತೆ ಪಡಿತರ ಅಂಗಡಿಗಳಲ್ಲಿ ಪ್ರತಿದಿನದ ವಿತರಣೆಯ ವಿವರ ಮತ್ತು ದಾಸ್ತಾನು ವಿವರಗಳನ್ನು ಪರಿಶೀಲಿಸಬೇಕು. ಪಡಿತರ ವಿತರಣೆಯ ತಂತ್ರಾಂಶ ಕಾರ್ಯನಿರ್ವಹಣೆಗೆ ಇಂರ್ಟನೆಟ್ ಸಮಸ್ಯೆಯಿದಲ್ಲಿ ಬಿಎಸ್ಎನ್ಎಲ್ ಮೂಲಕ ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಗಡಿಬಾಗದಲ್ಲಿ ಅನಧಿಕೃವಾಗಿ ಅಕ್ಕಿಯ ಮಾರಾಟ ಮತ್ತು ಸಾಗಾಟದ ಬಗ್ಗೆ ನಿಗಾ ವಹಿಸಬೇಕು ಎಂದಿದ್ದಾರೆ.