
ದಾಂಡೇಲಿ: ಜಿಲ್ಲೆಯಾದ್ಯಾಂತ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗಿದ್ದು ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ಹಾಗೂ ನಗರಸಭೆ ಸದಸ್ಯರಾದ ಮೋಹನ ಹಲವಾಯಿ ಇಂದು ಬೆಳಿಗ್ಗೆ ಜನತಾ ವಿದ್ಯಾಲಯ ಹತ್ತಿರ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಅವರು , ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿರುವ ನನ್ನೆಲ್ಲಾ ಪ್ರಿಯ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು . ಇನ್ನು ವಿದ್ಯಾರ್ಥಿಗಳಾಗಿರುವ ನೀವು ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ಯಶಸ್ಸು ನಿಮ್ಮದಾಗಲಿ, ನಿಮ್ಮೆಲ್ಲರಿಗೂ ದಾಂಡೇಲಪ್ಪ ಸನ್ಮಂಗಳವನ್ನುಂಟು ಮಾಡಲಿ ಎಂದರು ಇ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಅಶ್ಪಾಕ ಶೇಖ, ನಗರ ಸಭೆ ಸದಸ್ಯ ಅನೀಲ ನಾಯ್ಕರ್,ಮಾಜಿ ನಗರಸಭೆ ಸದಸ್ಯ ಅನೀಲ ದಂಡಗಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.