
ಕಾರವಾರ:
ಜಿಲ್ಲೆಯಲ್ಲಿ 2025ರ ಎಸ್ಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಮೊದಲದಿನವಾದ ಶುಕ್ರವಾರದಂದು ಪರೀಕ್ಷೆಯು ಸುಸೂತ್ರವಾಗಿ ನಡೆಯಿತು.
ಜಿಲ್ಲೆಯಲ್ಲಿ ಮೊದಲ ದಿನ ನಡೆದ ಪ್ರಥಮ ಭಾಷೆ ಪರೀಕ್ಷೆಗೆ ಕಾರವಾರ ಶೈಕ್ಷಣಿಕ ಜಿಲ್ಲೆಯಿಂದ 9,335 ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಯಿಂದ 9,654 ವಿದ್ಯಾರ್ಥಿಗಳು ನೊಂದಾಯಿಸಿಕೊAಡಿದ್ದರು. ಜಿಲ್ಲೆಯ ಒಟ್ಟೂ 37 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದವು. ಕಾರವಾರ ಶೈಕಷಣಿಕ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕುಗಳಿಂದ ಒಟ್ಟೂ 9,209 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 126 ವಿದ್ಯಾರ್ಥಿಗು ಗೈರಾಗಿದ್ದರು. ಶಿರಸಿ ಶೈಕ್ಷಣಿಕ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಹಳಿಯಾಳ, ಜೋಯಿಡಾ ತಾಲೂಕುಗಳಿಂದ ಒಟ್ಟೂ 9,560 ಪರೀಕ್ಷೆಗೆ ಹಾಜರಾಗಿದ್ದು 94 ವಿದ್ಯಾರ್ಥಿಗಳು ಗೈರಾಗಿದ್ದರು.