
ದಾಂಡೇಲಿ : ನಿರ್ಮಲ ನಗರದ ಶ್ರೀ ಕಾಳಿಕಾ ಭವಾನಿ ಮಂದಿರದ ಜಾತ್ರಾ ಮಹೋತ್ಸವವು ನಾಳೆ ಭಾನುವಾರ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಬಿ.ಎಫ್.ರಾಥೋಡ ಮತ್ತು ಖಜಾಂಚಿ ಎನ್.ವಿ.ಪಾಟೀಲ್ ಅವರು ಹೇಳಿದರು.
ಭಾನುವಾರ ಬೆಳಿಗ್ಗೆ ೬ ಗಂಟೆಗೆ ಮಹಾಭಿಷೇಕ, ಅಲಂಕಾರ ಹಾಗೂ ಆರತಿ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ ಎಂಟು ಗಂಟೆಗೆ ಪಲ್ಲಕ್ಕಿ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ ೧೨ ಗಂಟೆಗೆ ಮಹಾಮಂಗಳಾರತಿ ನಡೆದು ಪ್ರಸಾದ ವಿತರಣೆ ಜರಗಿದ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಜಾತ್ರೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿ ಶ್ರೀ ಕಾಳಿಕಾ ಭವಾನಿ ದೇವಿಯ ಕೃಪೆಗೆ ಪಾತ್ರರಾಗುವಂತೆ ಅವರು ವಿನಂತಿಸಿದ್ದಾರೆ. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿಯ ಉಪಾಧ್ಯಕ್ಷ ರವಿ ಚೌಹ್ವಾಣ್ ಉಪಸ್ಥಿತರಿದ್ದರು.