
ದಾಂಡೇಲಿ:
ಬೆಂಗಳೂರು ಕಡೆಯಿಂದ ದಾಂಡೇಲಿಗೆ ಬರುತ್ತಿದ್ದ ಪ್ರವಾಸಿಗರ ಕಾರೊಂದು ದಾಂಡೇಲಿ – ಅಂಬಿಕಾನಗರ ರಸ್ತೆಯ ಬಡಕಾನಶಿರಡಾದ ಬಳಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಬೆಂಗಳೂರು ಕಡೆಯಿಂದ ದಾಂಡೇಲಿಗೆ ಬರುತ್ತಿದ್ದಂತಹ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಡಕಾನಶಿರಡಾದ ಹತ್ತಿರ ರಸ್ತೆಯ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮವಾಗಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ ಎನ್ನುವ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ.