
ಕಾರವಾರ:
ದ್ವಿತೀಯ ಪಿಯುಸಿಯಲ್ಲಿ ಉತ್ತರಕನ್ನಡ ಜಿಲ್ಲೆ ಶೇ. 82.93 ಫಲಿತಾಂಶದೊಂದಿಗೆ ರಾಜ್ಯದಲ್ಲಿ 6ನೇ ಸ್ಥಾನ ಪಡೆದುಕ್ಕೊಂಡಿದೆ.
ಕಳೆದ ವರ್ಷ ಶೇ. 92.51ಫಲಿತಾಂಶದೊಂದಿಗೆ 4ನೇ ಸ್ಥಾನದಲ್ಲಿದ್ದ ಜಿಲ್ಲೆ ಈ ಬಾರಿ ಎರಡು ಸ್ಥಾನಗಳ ಕುಸಿತ ಕಂಡಿದೆ. ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ 13,005 ರೆಗ್ಯೂಲರ್ ವಿದ್ಯಾರ್ಥಿಗಳ ಪೈಕಿ 10,785 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದಲ್ಲದೆ ಖಾಸಗಿಯಾಗಿ ಪರೀಕ್ಷೆ ಬರೆದ 384 ವಿದ್ಯಾರ್ಥಿಗಳ ಪೈಕಿ 112 ವಿದ್ಯಾರ್ಥಿಗಳು ಹಾಗೂ ಪುನರಾವರ್ತಿತ 310ರಲ್ಲಿ 60 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಎಂದಿನಂತೆ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ಪರಿಕ್ಷೆ ಬರೆದ 8005 ಬಾಲಕೀಯರ ಪೈಕಿ 6702 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನು 5694 ಬಾಲಕರ ಪೈಕಿ 4255 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.84.69 ನಗರ ಪ್ರದೇಶದ ವಿದ್ಯಾರ್ಥಿಗಳು ಹಾಗೂ ಶೇ. 76.48 ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಇನ್ನು ಜಿಲ್ಲೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದ 4377 ವಿದ್ಯಾರ್ಥಿಗಳ ಪೈಕಿ 4207 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 88.89 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ 5213 ವಿದ್ಯಾರ್ಥಿಗಳ ಪೈಕಿ 4321 ವಿದ್ಯಾರ್ಥಿಗಳು ಉತ್ತೀರ್ಣರಾಗದ್ದು ಶೇ. 82.89 ಫಲಿತಾಂಶ ಬಂದಿದೆ. ಇನ್ನು ಕಲಾವಿಭಾಗದಲ್ಲಿ ಪರೀಕ್ಷೆ ಬರೆದ 3059 ವಿದ್ಯಾರ್ಥಿಗಳ ಪೈಕಿ 2257 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.73.78 ಫಲಿತಾಂಶ ಬಂದಿದೆ.