
ಭಟ್ಕಳ:
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಬೆಂ ನಾರಾಯಣ ಅವರು ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆನಡೆಸಿರುವುದನ್ನು ಖಂಡಿಸಿ ಬಿಜೆಪಿ ಮತ್ತು ಹಿಂದು ಸಂಘಟನೆ ಕಾರ್ಯಕರ್ತರು ಭಟ್ಕಳ ನಗರ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಕಾರ್ಯಕರ್ತ ಶ್ರೀನಿವಾಸ ನಾಯ್ಕ ಅವರ ಮೇಲೆ ಹಲ್ಲೆ ಖಂಡಿಸಿ ಬಿಜೆಪಿ ಮತ್ತು ಹಿಂದು ಸಂಘಟನೆ ಕಾರ್ಯಕರ್ತರು ಭಟ್ಕಳ ನಗರ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಮಂಗಳವಾರ ರಾತ್ರಿ ಕೂಡ ಘಟನೆ ಖಂಡಿಸಿ ಕಾರ್ಯಕರ್ತರು ಹಲವು ತಾಸುಗಳ ಕಾಲ ರಾಷ್ಟ್ರೀಯ ಹೆದ್ದಾರಿ ತಡೆದದಲ್ಲದೆ, ಠಾಣೆ ಮುಂದೆ ಪ್ರತಿಭಟಿಸಿ ಆಕ್ರೋಶ ಹೊರ ಹಾಕಿದ್ದರು.
ನಿನ್ನೆ ಶಿರಸಿಯಲ್ಲಿ ರೌಡಿ ಶೀಟರ್ ಪರೇಡ್ ಸಂಬಂಧ ಶ್ರೀನಿವಾಸ ನಾಯ್ಕ ಅವರನ್ನ ಬರಲು ಸೂಚಿಸಲಾಗಿತ್ತು. ಶ್ರೀನಿವಾಸ ಹಾಜರಾಗಿದ್ದ ಸಂದರ್ಭದಲ್ಲಿ ಎಸ್ಪಿ ಎಂ ನಾರಾಯಣ್ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿತ್ತು. ಈ ನಡುವೆ ಶ್ರೀನಿವಾಸ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.
ಘಟನೆ ಖಂಡಿಸಿ ಬಿಜೆಪಿ ಮತ್ತು ಹಿಂದು ಸಂಘಟನೆ ಕಾರ್ಯಕರ್ತರು ಎಸ್ಪಿ ನಾರಾಯಣ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಇಂದು ನಗರಠಾಣೆ ಪ್ರತಿಭಟನಾ ಸ್ಥಳಕ್ಕೆ ಎಸ್ಪಿ ಬರುತ್ತಿದ್ದಂತೆ ವಿರುದ್ಧ ಘೋಷಣೆ ಕೂಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಕ್ಷಮೆ ಕೇಳುವಂತೆ ಪ್ರತಿಭಟನಾಕಾರರ ಒತ್ತಾಯಿಸಿದರು.
ಪ್ರತಿಭಟನಾಕಾರರನ್ನ ಸಮಾಧಾನಪಡಿಸಲು ಪೊಲೀಸ್ ಅಧಿಕಾರಿಗಳು ಪ್ರಯತ್ನಿಸಿದರು. ಅಂತೂ ಪ್ರತಿಭಟನಾ ಮುಖಂಡರೊಂದಿಗೆ ಎಸ್ಪಿ ಎಂ ನಾರಾಯಣ್ ಮಾತುಕತೆ ನಡೆಸುತ್ತಿದ್ದಾರೆ