
ಭಟ್ಕಳ:
2013ರಲ್ಲಿ ನಡೆದ ಹೈದಾರಾಬಾದ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಸದಸ್ಯ ಕರ್ನಾಟಕದ ಯಾಸಿನ್ ಭಟ್ಕಳ್ ಸೇರಿದಂತೆ ಐವರಿಗೆ ಮರಣದಂಡನೆ ವಿಧಿಸಿದ್ದ ಎನ್ಐಎ ವಿಚಾರಣಾ ಕೋರ್ಟ್ ತೀರ್ಪನ್ನು ತೆಲಂಗಾಣ ಹೈಕೋರ್ಟ್ ಎತ್ತಿಹಿಡಿದಿದೆ.
2013ರ ಫೆಬ್ರವರಿ 21ರಂದು ನಗರದ ಜನದಟ್ಟಣೆಯ ಪ್ರದೇಶ ದಿಲ್ಸುಮ್ನಗರದಲ್ಲಿ ಅವಳಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 18 ಮಂದಿ ಮೃತಪಟ್ಟು 131 ಮಂದಿ ಗಾಯಗೊಂಡಿದ್ದರು. ಪ್ರಕರಣ ಸಂಬಂಧ 2016ರ ಡಿಸೆಂಬರ್ 13ರಂದು ಎನ್ಐಎ ಕೋರ್ಟ್, ಯಾಸಿನ್ ಭಟ್ಕಳ್ ಸೇರಿ ಐವರನ್ನು ದೋಷಿಗಳೆಂದು ಪರಿಗಣಿಸಿ ಗಲ್ಲು ಶಿಕ್ಷೆ ವಿಧಿ ಸಿತ್ತು. ಇದನ್ನು ಪ್ರಶ್ನಿಸಿ ಐವರೂ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ತೆಲಂಗಾಣ ಹೈಕೋರ್ಟ್ ಕೂಡ ಗಲ್ಲು ಶಿಕ್ಷೆಯನ್ನು ಎತ್ತಿ ಹಿಡಿದಿದೆ.