
ಅಂಕೋಲಾ:
ಕೇಂದ್ರ ಸರಕಾರವು ಗ್ಯಾಸ್, ಪೆಟ್ರೋಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಶನಿವಾರ ಅಂಕೋಲಾದ ಮೂಖ್ಯ ರಸ್ತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸಿನ ಅಧ್ಯಕ್ಷೆ ಸೌಮ್ಯಾ ರೆಡ್ಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಮಹಿಳಾಕಾರ್ಯಕರ್ತರು ಭಾಗಿಯಾಗಿದ್ದರು. ಬೆಲೆ ಏರಿಕೆಮಾಡಿದಕೇಂದ್ರ ಸರಕಾರದ ವಿರುದ್ಧ ವಿವಿಧ ಘೋಷಣೆ ಕೂಗಿದರು. ಬಳಿಕ ರಸ್ತೆಯಲ್ಲಿ ಕಟ್ಟಿಗೆಯಿಂದ ಚಹಾ ಮಾಡಯವ ಮೂಲಕವಿನೂತನವಾಗಿ ಪ್ರತಿಭಟನೆ ಮಾಡಿದರು.
ಸಚಿವ ಮಂಕಾಳ ವೈದ್ಯರ ಪುತ್ರಿ ಬೀನಾ ವೈದ್ಯ, ಉತ್ತರಕನ್ನಡ ಜಿಲ್ಲಾ ಕಾಂಗ್ರೇಸ್ ಸಮಿತಿಯ ಅಧ್ಯಕ್ಷ ಸಾಯಿ ಗಾವಂಕರ ಮತ್ತು ಉತ್ತರಕನ್ನಡ ಜಿಲ್ಲಾ ಮಹಿಳಾ ಕಾಂಗ್ರೇಸಿನ ಅಧ್ಯಕ್ಷೆ ಸುಜಾತಾ ಗಾವಂಕರ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.