
ಕಾರವಾರ:
ಅಂಬೇಡ್ಕರ್ ಜಯಂತಿಯ ಹಿನ್ನೆಲೆ ಸೋಮವಾರ ಇಲ್ಲಿನ ನಗರಸಭೆ ಆವರಣದಿಂದ ಆರಂಭವಾದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬುಜಗಜೀವನ ರಾಮ್ ರವರ ಭಾವಚಿತ್ರಗಳ ಮೆರವಣಿಗೆಯು ವಿಜೃಂಭಣೆಯಿಂದ ನಡೆಯಿತು.
ಎಂಜಿ ರಸೆಯಿಂದ ಸಾಗಿ ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತ ಹಾಗೂ ಗ್ರೀನ್ ಸ್ಟ್ರೀಟ್ ರಸ್ತೆಯಿಂದ ಜಿಲ್ಲಾಧಿಕಾರಿ ಕಚೇರಿಯ ಬಳಿ ಸಮಾರೋಪಗೊಂಡಿತು. ಮೆರವಣಿಗೆಯಲ್ಲಿ ಪೊಲೀಸ್ ಬ್ಯಾಂಡ್, ಸುಗ್ಗಿ ಕುಣಿತ, ಡೋಲು, ಲಂಬಾಣಿ ಕುಣಿತ, ಸಿದ್ದಿ ಜನಾಂಗದ ಡಮಮಿ ನೃತ್ತ, ಯಕ್ಷಗಾನ, ಬೊಂಬೆಯಾಟದ ಕಲಾವಿದರು ಮೆರಗು ನೀಡಿದರು.
ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ, ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕನಿಷ್ಕ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ನಗರಸಭೆ ಆಯುಕ್ತ ಜಗದೀಶ ಹುಲಗೆಜ್ಜಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ವೈ.ಕೆ. ಉಮೇಶ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಮಾಲಾ ಹುಲಸ್ವಾರ, ಪರಿಶಿಷ್ಟ ವರ್ಗಗಳ ಸಮುದಾಯದ ಜಿಲ್ಲಾಧ್ಯಕ್ಷ ನಾಗರಾಜ ತಳವಾರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಜಿಲ್ಲೆಯ ಪ.ಜಾತಿ ಮತ್ತು ಪಂಗಡಗಳ ಸಂಘಟನೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಇದ್ದರು.