
ಶಿರಸಿ :
ತಾಲೂಕಿನ ಪಂಡಿತ್ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಭೇಟಿ ನೀಡಿ ಆಸ್ಪತ್ರೆಯ ಪ್ರಗತಿಯಲ್ಲಿರುವ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಅಗತ್ಯ ಸಲಹೆ ನೀಡಿದರು.
ಈ ವೇಳೆ ಆಸ್ಪತ್ರೆಯಲ್ಲಿನ ಮೂಲಭೂತ ಸೌಕರ್ಯಗಳು ಹಾಗೂ ಸಾರ್ವಜನಿಕ ಸೇವೆಗಳ ಲಭ್ಯತೆಯ ಕುರಿತು ಮಾಹಿತಿ ಪಡೆದು ಸೇವೆಯಲ್ಲಿ ಕುಂದುಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಸಕ ಭೀಮಣ್ಣ ನಾಯ್ಕರು ಸಚಿವರಿಗೆ ಆಸ್ಪತ್ರೆಯ ಕಾಮಗಾರಿ ಮತ್ತು ಆಸ್ಪತ್ರೆಗೆ ಅಗತ್ಯವಾಗಿ ಬೇಕಾದ ಮೂಲಭೂತ ಸೌಕರ್ಯಗಳ ಬಗ್ಗೆ ಕೂಲಂಕೂಶವಾಗಿ ಚರ್ಚೆ ನಡೆಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ್ ಕಾಂದೂ, ಶಿರಸಿ ಉಪವಿಭಾಗಾಧಿಕಾರಿ ಕಾವ್ಯರಾಣಿ, ಜಿಲ್ಲಾ ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳು ಹಾಜರಿದ್ದರು.