
ಕಾರವಾರ:
ಅಂಕೋಲಾ ತಾಲೂಕಿನ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಸಂಭವಿಸಿದ್ದ ಗುಡ್ಡ ಕುಸಿತದಿಂದಾಗಿ ಗಂಗಾವಳಿ ನದಿಯಲ್ಲಿ ಸಂಗ್ರಹವಾದ ಮಣ್ಣು ತೆರವು ಕಾರ್ಯವನ್ನು ಕೂಡಲೇ ಕೈಗೊಳ್ಳುವಂತೆ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರಿ ಮತ್ತು ಬಂದರು ಇಲಾಖೆಯ ಆಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಿದ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಈಚೆಗೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ, ಗಂಗಾವಳಿ ನದಿಯಲ್ಲಿ ಸಂಗ್ರವಾದ ಮಣ್ಣು ತೆರವುಗೊಳಿಸುವ ಕಾರ್ಯವನ್ನು ನಿರ್ವಹಿಸುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಅದರಂತೆ ಒಂದು ವಾರದ ಒಳಗೆ ಎಲ್ಲಾ ಅಗತ್ಯ ಆಡಳಿತಾತ್ಮಕ ಮತ್ತು ತಾಂತ್ರಿಕ ಅನುಮೋದನೆ ಸೇರಿದಂತೆ ಎಲ್ಲಾ ಅನುಮತಿಗಳನ್ನು ಪಡೆದು ತಕ್ಷಣ ಮಣ್ಣು ತೆರವು ಕಾರ್ಯ ಆರಂಭಿಸಬೇಕು ಎಂದಿದ್ದಾರೆ.
ಮಣ್ಣು ತೆರವು ಕಾರ್ಯಚರಣೆಗೆ ಆಗಮಿಸುವ ಬಾರ್ಜ್ ಸಂಚಾರಕ್ಕೆ ನದಿಯಲ್ಲಿ ಯಾವುದೇ ಅಡಚಣೆಯಿಲ್ಲವಾಗಿದ್ದು, ನದಿಯಿಂದ ತೆರವುಗೊಳಿಸುವ ಮಣ್ಣನ್ನು ನಿಯಮಾವಳಿಗಳಂತೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಸೂಚಿಸಿದರು.