
ಕಾರವಾರ:
ಕೇಂದ್ರ ಸರಕಾರವು ವಿದೇಶಿಗರ ಕಾಯ್ದೆಗೆ ವಿಶೇಷ ಅಧಿಕಾರ ನೀಡಿ ಪಾಕಿಸ್ತಾನಿ ಪ್ರಜೆಗಳಿಗೆ ಭಾರತದ ವೀಸಾ ವಿತರಣೆಯನ್ನು ಅಮಾನತ್ತಿನಲ್ಲಿಡಲಾಗಿದೆ. ಈ ನಿಟ್ಟಿನಲ್ಲಿ ನಮ್ಮ ಜಿಲ್ಲೆಯಲ್ಲಿರುವ ಅಕ್ರಮವಾಗಿ ನೆಲೆಸುತ್ತಿರುವ ಪಾಕಿಸ್ತಾನಿಗಳು, ಅಧಿಕೃತ ದಾಖಲಾತಿಗಳಿಲ್ಲದೇ ಮಾನ್ಯತೆ ರದ್ದಾಗಿರುವ ವೀಸಾಗಳು ಹಾಗೂ ಅಮಾನತ್ತಿನಲ್ಲಿರುವ ವೀಸಾಗಳನ್ನು ಹೊಂದಿಕೊಂಡು ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿಬೇಕೆಂದು ಆಗ್ರಹಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿಗರು ಪ್ರತಿಭಟನೆ ನಡೆಸಿದರು.
ಪಾಕಿಸ್ತಾನದ ನೆರವಿನಿಂದ 26 ಜನ ಅಮಾಯಕ ಭಾರತೀಯ ಪ್ರಜೆಗಳನ್ನು ಉಗ್ರರು ಧರ್ಮವನ್ನು ಕೇಳಿ ತಿಳಿದು ಗುಂಡಿಕ್ಕಿ ಕೊಂದಿರುವುದನ್ನು ನೋಡಿ ಇಡೀ ದೇಶ ದಿಗ್ಬ್ರಾಂತವಾಗಿದೆ. ಅತ್ಯಂತ ದಾರುಣವಾದಂತಹ ಈ ದಾಳಿಯನ್ನು ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆಯಾದ ಐ.ಎಸ್.ಐ. ನೆರವಿನಿಂದ ಪಾಕಿಸ್ತಾನ ಸೇನೆ ಇಡೀ ದಾಳಿಯ ಯೋಜನೆಯನ್ನು ರೂಪಿಸಿ ಇಂತಹ ಬರ್ಬರ ಹತ್ಯಾಕಾಂಡವನ್ನು ಅರಗಿಸಿಕೊಳ್ಳಲಾಗದೆ ಇಡೀ ದೇಶ ಅತ್ಯಂತ ದೊಡ್ಡ ಆಘಾತಕ್ಕೊಳಗಾಗಿದೆ ಹಾಗೂ ಜಗತ್ತಿನ ಎಲ್ಲಾ ದೊಡ್ಡ ಶಕ್ತಿಶಾಲಿ ರಾಷ್ಟ್ರಗಳು ಭಾರತದ ಜೊತೆ ನಿಲ್ಲುವುದಾಗಿ ಘೋಷಿಸಿವೆ.
ಈ ದುರ್ಘಟನೆಯ ನಂತರದಲ್ಲಿ ಕೇಂದ್ರ ಸರ್ಕಾರವು ಸಿಂಧೂ ನದಿ ನೀರಿನ ಒಪ್ಪಂದಕ್ಕೆ ಇತಿಶ್ರೀ ಹಾಡಿ ಐತಿಹಾಸಿಕ ನಿರ್ಣಯ ತೆಗೆದುಕೊಂಡಿರುವುದು ಮಾತ್ರವಲ್ಲದೇ, ಪಾಕಿಸ್ತಾನದೊಂದಿಗಿನ ಎಲ್ಲಾ ರಾಜತಾಂತ್ರಿಕ ಸಂಬಂಧಗಳನ್ನು ಕಡಿತಗೊಳಿಸಿದೆ. ಈ ನಿಟ್ಟಿನಲ್ಲಿ ನಮ್ಮ ಜಿಲ್ಲೆಯಲ್ಲಿರುವ ಅಕ್ರಮವಾಗಿ ನೆಲೆಸುತ್ತಿರುವ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಹೊರಹಾಕಬೇಕು ಎಂದು ಒತ್ತಾಯಿಸಿದರು ಮಾಜಿ ಶಾಸಕ ಸುನೀಲ ಹೆಗಡೆ ಆಗ್ರಹಿಸಿದರು.
ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಎಸ್.ಹೆಗಡೆ ಹಾಗೀ ಕಾರ್ಯಕರ್ತರು ಇದ್ದರು.